ಮಡಿಕೇರಿ ಖಾಸಗಿ ಶಾಲೆಯ 9 ಮಕ್ಕಳಿಗೆ ಕೋವಿಡ್ ಸೋಂಕು…

62
firstsuddi

ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಖಾಸಗಿ ಶಾಲೆಯ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಸೋಂಕಿತ ಮಕ್ಕಳ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿ ಶಾಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಮೊದಲು ಶಾಲಾ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಒಂಬತ್ತು ಮಕ್ಕಳಿಗೆ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಕ್ಕಳಲ್ಲಿ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಸೋಂಕಿತರೆಲ್ಲರೂ ಎಂಟನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಅವರ ಮನೆಯಲ್ಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕೊಡಗು ಡಿಹೆಚ್ಒ ಡಾ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.