ಕಿವೀಸ್ ವಿರುದ್ಧ ಎರಡನೇ ಟೆಸ್ಟ್​ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು…

131
firstsuddi

ಮುಂಬೈ : ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಭಾರತ 372 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯನ್ನು 1-0 ರಿಂದ ಗೆದ್ದು ಬೀಗಿತು.

ಕೊಹ್ಲಿ ಪಡೆ ನೀಡಿದ 540 ರನ್ ಗುರಿ ಬೆನ್ನಟ್ಟಿದ್ದ ನ್ಯೂಜಿಲ್ಯಾಂಡ್ 4ನೇ ದಿನದಾಟದ ಆರಂಭದ ಕೆಲವೇ ಹೊತ್ತಿನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 167 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ, ಭಾರತ 372 ರನ್ ಗಳಿಂದ ಜಯಗಳಿಸಿದೆ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 325 ರನ್ಗಳಿಗೆ ಆಲೌಟ್ ಆದರೆ, ಕಿವೀಸ್ ತನ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 62 ರನ್ಗಳಿಗೆ ಸರ್ವಪತನ ಕಂಡಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ ಸಿಕ್ಕಿರುವ 263 ರನ್ ಗಳ ಬೃಹತ್ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ್ದ ಭಾರತ 7 ವಿಕೆಟ್ ಕಳೆದುಕೊಂಡು 276 ರನ್ ಗಳಿಸಿದ್ದ ವೇಳೆ ಡಿಕ್ಲೇರ್ ಘೋಷಿಸಿಕೊಂಡಿತು. ಕಾನ್ಪುರದಲ್ಲಿ ಉಭಯ ತಂಡಗಳ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.