ಕೊರೊನಾ ಹೆಚ್ಚಾದರೆ ಶಾಲೆ ಕ್ಲೋಸ್ ಮಾಡಲು ಸರ್ಕಾರ ಸಿದ್ಧವಿದೆ : ಬಿ.ಸಿ.ನಾಗೇಶ್.

88
firstsuddi

ಬೆಂಗಳೂರು : ಒಂದು ವೇಳೆ ಕೊರೊನಾ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಸಿದ್ಧವಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರಲ್ಲ ಅಂತ ವರದಿಗಳು ಬಂದಿವೆ. ಇತ್ತ ತಜ್ಞರು ಮೂರನೇ ಅಲೆ ಫೆಬ್ರವರಿ ಅಂತ್ಯಕ್ಕೆ ಬರಬಹುದು ಅಂತಿದ್ದಾರೆ. ಪರೀಕ್ಷೆ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ ಅಗತ್ಯ ಕ್ರಮಕೈಗೊಳ್ಳುತ್ತೇವೆ. ಸೋಂಕು ಹೆಚ್ಚಾದರೆ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೂ ಸರ್ಕಾರ ಸಿದ್ಧ ಇದೆ. ಯಾವುದೇ ರೀತಿಯ ಆತಂಕ ಪೋಷಕರಿಗೆ ಬೇಡ. ಇವತ್ತು ಅಧಿಕಾರಿಗಳ ಜೊತೆ ಸಭೆ ಮಾಡಿ ಎಸ್ಒಪಿ ಮತ್ತಷ್ಟು ಕಠಿಣ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.

ವಸತಿ ಹಾಗೂ ನವೋದಯ ಶಾಲೆಗಳಲ್ಲಿ ಸೋಂಕು ಕಂಡು ಬಂದಿದೆ. 1 ರಿಂದ 10ನೇ ತರಗತಿಗಳ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ಹಾಗಾಗಿ, ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು. ಯಾವುದೇ ಸಮಸ್ಯೆ, ಆತಂಕ ಇಲ್ಲ ಎಂದರು.