ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ…

65
firstsuddi

ಬೆಂಗಳೂರು : ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ನಿನ್ನೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖಂಡ ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಾಗಿದ್ದು, ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಈಗಾಗಲೇ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಲೈಫ್​​ ಸಪೋರ್ಟ್​​ ವ್ಯವಸ್ಥೆಯಲ್ಲಿರುವ ವರುಣ್​ ಸಿಂಗ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಇದರ ಬೆನ್ನಲ್ಲೇ ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರುಣ್ ಸಿಂಗ್ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವರುಣ್ ಸಿಂಗ್ ಅವರ ಪಕ್ಕದ ಮನೆಯಲ್ಲೇ ವಾಸವಾಗಿರುವ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಇಶಾನ್, ನಾನು ದೂರವಾಣಿ ಮೂಲಕ ಕೆ.ಪಿ.ಸಿಂಗ್ ಬಳಿ ಮಾತನಾಡಿದ್ದೇನೆ. ಕೆ.ಪಿ.ಸಿಂಗ್ ಅವರಿಗೆ ವರುಣ್ ಸಿಂಗ್ ಬಗ್ಗೆ ಹೆಮ್ಮೆಯಿದೆ. ಆತ ಫೈಟರ್, ಜೀವನ್ಮರಣದ ಹೋರಾಟದಲ್ಲೂ ಗೆದ್ದು ಬರುತ್ತಾನೆ ಎಂಬ ನಂಬಿಕೆಯಿದೆ ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.