ಹುಬ್ಬಳ್ಳಿ : ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಸ್ಯೆ ಎದುರಿಸಿತು.
ಇಂಡಿಗೊ 6ಇ-7227 ವಿಮಾನದ ಮೂಲಕ ಸಿಎಂ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಅರ್ಧ ಗಂಟೆ ಆದ್ರೂ ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ವಿಮಾನ ಆಕಾಶದಲ್ಲೇ ಮೂರು ಸುತ್ತು ಸುತ್ತು ಹಾಕಿದೆ. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 7:30ಕ್ಕೆ ಲ್ಯಾಡಿಂಗ್ ಆಗಬೇಕಿದ್ದ ವಿಮಾನ ಅರ್ಧ ಗಂಟೆ ತಡವಾಗಿ ಲ್ಯಾಂಡಿಂಗ್ ಆಯಿತು.
ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿಗ್ಗಾಂವನಲ್ಲಿ ಮತಚಲಾವಣೆ ಮಾಡಲು ಆಗಮಿಸಿದ್ದೇನೆ. ಆದರೆ ಹವಾಮಾನ ವೈಪ್ಯರಿತ್ಯರಿಂದ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ. ಕ್ರಿಸಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವ ಬಗ್ಗೆ ಸದ್ಯಕ್ಕೆ ಇನ್ನೂ ತೀರ್ಮಾನ ಮಾಡಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.










