ಸೇನಾ ಗೌರವಗಳೊಂದಿಗೆ ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್ ಅಂತ್ಯಕ್ರಿಯೆ…

83
firstsuddi

ನವದೆಹಲಿ : ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಬ್ರಿಗೇಡಿಯರ್ ಲಖ್ಬಿಂದರ್ ಸಿಂಗ್ ಲಿಡ್ಡರ್ ಅವರ ಅಂತ್ಯಕ್ರಿಯೆ ಇಂದು ಸೇನಾ ಗೌರವಗಳೊಂದಿಗೆ ನೆರವೇರಿತು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮೂರು ಸೇನಾ ಪಡೆಯ ಮುಖ್ಯಸ್ಥರದ ಜನರಲ್ ಎಂಎಂ ನರವಾಣೆ, ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ಜೊತೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ದೆಹಲಿ ಕಂಟೋನ್ಮೆಂಟ್ ನ ಬ್ರಾರ್ ಸ್ಕ್ವೇರ್ ನಲ್ಲಿ ಬ್ರಿಗೇಡಿಯರ್ಗೆ ಗೌರವ ಸಲ್ಲಿಸಿದರು. ಲಿಡ್ಡರ್ ಅವರ ಪಾರ್ಥಿವ ಶರೀರಕ್ಕೆ ಪತ್ನಿ ಗೀತಿಕಾ ಲಿಡ್ಡರ್ ಮತ್ತು ಮಗಳು ಆಶ್ನಾ ಲಿಡ್ಡರ್ ಕಣ್ಣೀರೊಂದಿಗೆ ಅಂತಿಮ ನಮನ ಸಲ್ಲಿಸಿದರು.

ಡಿಸೆಂಬರ್ 1990ರಲ್ಲಿ 2 ಎಂಏ ಖIಈ ನಲ್ಲಿ ವೃತ್ತಿಜೀವನ ಆರಂಭಿಸಿದದ ಬ್ರಿಗೇಡಿಯರ್ ಲಖ್ಬಿಂದರ್ ಸಿಂಗ್ ಲಿಡ್ಡರ್, ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ರಕ್ಷಣಾ ಸಹಾಯಕರಾಗಿದ್ದರು.