ನವೋದಯ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ…

75
firstsuddi

ದಾವಣಗೆರೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಉಲ್ಬಣಗೊಳ್ಳುತ್ತಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯ ನವೋದಯ ಶಾಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ 4 ಕೊಠಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ.

ನವೋದಯ ಶಾಲೆಯಲ್ಲಿ 497 ವಿದ್ಯಾರ್ಥಿಗಳು, 57 ಬೋಧಕ, ಬೋಧಕೇತರ ಸಿಬ್ಬಂದಿಯ ಸ್ವಾಬ್ ಟೆಸ್ಟ್ ಮಾಡಿದ್ದು ಕೋವಿಡ್ ಪರೀಕ್ಷೆಯಲ್ಲಿ 4 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ರವಾನಿಸಿದ್ದು ಮತ್ತೆ ಪಾಸಿಟಿವ್ ಬಂದರೆ ಜೀನೊಮಿಕ್ ಟೆಸ್ಟ್ ಗೆ ಕಳುಹಿಸಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಅರೋಗ್ಯವಾಗಿದ್ದು ಯಾವುದೇ ರೋಗ ಲಕ್ಷಣಗಳಿಲ್ಲ ಎಂದು ತಿಳಿದುಬಂದಿದೆ.