ಸುವರ್ಣಸೌಧ ಮುತ್ತಿಗೆಗೆ ಯತ್ನ – ಕೋಡಿಹಳ್ಳಿ ಚಂದ್ರಶೇಖರ್, ರೈತರನ್ನು ವಶಕ್ಕೆ ಪಡೆದ ಪೊಲೀಸರು…

85
firstsuddi

ಬೆಳಗಾವಿ : ರಾಜ್ಯ ಸರ್ಕಾರವೂ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಸುವರ್ಣಸೌಧ ಮುತ್ತಿಗೆಗೆ ಯತ್ನಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನಾ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ರೈತರು ಸುವರ್ಣಸೌಧದವರೆಗೆ ಪಾದಯಾತ್ರೆಗೆ ನಿರ್ಧರಿಸಿದ್ದರು. ಪಾದಯಾತ್ರೆಗೂ ಮುನ್ನ ಹಿರೇಬಾಗೇವಾಡಿಯ ಬಸವೇಶ್ವರ ಪುತ್ಥಳಿಗೆ ಕೋಡಿಹಳ್ಳಿ ಚಂದ್ರಶೇಖರ ಮಾಲಾರ್ಪಣೆಗೆ ಮುಂದಾದರು. ಆಗ ರೈತರನ್ನು ವಶಕ್ಕೆ ಪಡೆದ ಪೊಲೀಸರು ಒತ್ತಾಯಪೂರ್ವಕವಾಗಿ ಬಸ್ಸಿನಲ್ಲಿ ಹತ್ತಿಸಿದರು. ಬಳಿಕ ಸುವರ್ಣಸೌಧ ಎದುರಿನ ಕೊಂಡುಸಕೊಪ್ಪ ಪ್ರತಿಭಟನಾ ಸ್ಥಳಕ್ಕೆ ಕರೆತರಲಾಯಿತು. ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು. ಕೊಂಡುಸಕೊಪ್ಪದ ಪ್ರತಿಭಟನಾ ಸ್ಥಳದಲ್ಲಿ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರೆದಿದೆ.