ಹೈದರಾಬಾದ್(ತೆಲಂಗಾಣ) : ಮೊದಲ ಬಾರಿಗೆ ತೆಲಂಗಾಣ ರಾಜ್ಯದಲ್ಲಿ ಎರಡು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ಕೀನ್ಯಾ ಮೂಲದ 24 ವರ್ಷ ವಯಸ್ಸಿನ ಮಹಿಳೆ ಈ ತಿಂಗಳ 12ರಂದು ತೆಲಂಗಾಣಕ್ಕೆ ಬಂದಿದ್ದು, ಆಕೆಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಹಾಗೂ ಹೈದರಾಬಾದ್ ನ ಟೋಲಿಚೌಕಿ ಪ್ರದೇಶದಲ್ಲಿ ಸೋಮಾಲಿಯಾ ಮೂಲದ ಮತ್ತೊಬ್ಬ ವ್ಯಕ್ತಿಗೆ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಇಬ್ಬರೂ ಸೋಂಕಿತರನ್ನು ಚಿಕಿತ್ಸೆಗಾಗಿ ತೆಲಂಗಾಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಗೆ ಕಳುಹಿಸಲಾಗಿದೆ. ಈ ಬಗ್ಗೆ ಜನರು ಆತಂಕಕ್ಕೆ ಒಳಗಾಗುವುದು ಬೇಡ. ಕೋವಿಡ್ ನಿಯಮಗಳನ್ನು ಪಾಲಿಸಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೂ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ವರದಿಯಾಗಿದ್ದು, 7 ವರ್ಷದ ಬಾಲಕನಲ್ಲಿ ಸೋಂಕು ಪತ್ತೆಯಾಗಿದೆ.










