ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಎಂ ಎಂ ನರವಾಣೆ ಅಧಿಕಾರ ಸ್ವೀಕಾರ…

146
firstsuddi

ನವದೆಹಲಿ : ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರು ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್‌ ಆಫ್‌ ಸ್ಟಾಫ್‌ ಕಮಿಟಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಸಿಡಿಎಸ್ ಜನರಲ್ ಬಿಪಿನ್ ರಾವತ್ ನಿಧನದ ಬಳಿಕ ಸಿಬ್ಬಂದಿ ಮುಖ್ಯಸ್ಥರ ಸಮಿತಿಯ ಅಧ್ಯಕ್ಷಸ್ಥಾನ ತೆರವಾಗಿದ್ದು, ಮೂರು ಸೇನಾ ಮುಖ್ಯಸ್ಥರ ಪೈಕಿ ಅತ್ಯಂತ ಹಿರಿಯರಾಗಿರುವ ಜನರಲ್ ನರವಾಣೆ ಅವರಿಗೆ ಈ ಸಮಿತಿಯ ಅಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ.

ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಇತರ 12 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ.