ಹೊತ್ತಿ ಉರಿದ ಖಾಸಗಿ ಬಸ್ – ಪ್ರಯಾಣಿಕರು ಪಾರು…

67
firstsuddi

ಕಾರಾವಾರ : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡಕೆರೆ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ.

ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮುಂಬಯಿಯಿಂದ ಮಂಗಳೂರು ಕಡೆ ಬಸ್ ಸಂಚರಿಸುತ್ತಿತ್ತು. ಬಸ್ ನಲ್ಲಿ ಇದ್ದ ಸುಮಾರು 22 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.

ಬೆಂಕಿ ಹೊತ್ತಿಕೊಂಡಿದ್ದರಿಂದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.