ಶಿವಾಜಿ ಪುತ್ಥಳಿಗೆ ಕಪ್ಪು ಮಸಿ – ಪೊಲೀಸ್ ಬಿಗಿ ಭದ್ರತೆ…

60
firstsuddi

ಬೆಂಗಳೂರು : ನಗರದ ಸ್ಯಾಂಕಿ ಕೆರೆ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಪುತ್ಥಳಿಗೆ ಕಿಡಿಗೇಡಿಗಳು ಕಪ್ಪುಮಸಿ ಸುರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ ಎನ್ನಲಾಗ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯಿಂದ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಶಿವಾಜಿ ಪ್ರತಿಮೆಗೆ ಬಿಗಿ ಭದ್ರತೆಯನ್ನು ಒದಗಿಸಿದ್ದು, ಭದ್ರತೆಗಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಸುಟ್ಟಿರುವ ಹಿನ್ನೆಲೆಯಲ್ಲಿ ನಗರದ ಸ್ಯಾಂಕಿ ಕೆರೆ ಜಂಕ್ಷನ್ ನಲ್ಲಿ ಇರುವ ಶಿವಾಜಿ ಮಹಾರಾಜರ ಸ್ಮಾರಕಕ್ಕೆ ಕಿಡಿಗೇಡಿಗಳು ಅವಮಾನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗ್ತಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.