ಕೋಲ್ಕತ್ತಾ : 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ಸಂಜೆ 9ನೇ ತರಗತಿಯ ವಿದ್ಯಾರ್ಥಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ಪರಿಚಯಸ್ಥ ಹಿನ್ನೆಲೆ ಬಾಲಕಿ ಆತನೊಂದಿಗೆ ತೆರಳಿದ್ದಾಳೆ. ಬಳಿಕ ಮಾರ್ಗಮಧ್ಯೆ ಮತ್ತೊಬ್ಬ ಆರೋಪಿ ವಾಹನವನ್ನು ಹತ್ತಿದ್ದಾನೆ. ಇಬ್ಬರೂ ಸೇರಿ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಆರೋಪಿಗಳಿಬ್ಬರು ಆಕೆಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಘಟನೆ ಕುರಿತು ಬಾಲಕಿಯು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಗಳಲ್ಲಿ ಆಟೋ ಚಾಲಕನನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಸದ್ಯ ಬಾಲಕಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.










