ಪ್ರತಿಪಕ್ಷಗಳ ವಿರೋಧದ ನಡುವೆಯೇ ಮತಾಂತರ ನಿಷೇಧ ವಿಧೇಯಕ ಅಂಗೀಕಾರ…

100
firstsuddi

ಬೆಳಗಾವಿ : ವಿರೋಧ ಪಕ್ಷಗಳ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆಗೆ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ. ಪ್ರತಿಪಕ್ಷಗಳ ತೀವ್ರ ಆಕ್ಷೇಪ, ಗದ್ದಲದ ನಡುವೆಯೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಕ ವಿಧೇಯಕ -2021 ಅನ್ನು ಧ್ವನಿಮತದ ಮೂಲಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಇನ್ನು ಕಾಂಗ್ರೆಸ್ ಸದಸ್ಯರ ಗದ್ದಲದ ನಡುವೆಯೇ ಸ್ಪೀಕರ್ ಕಾಗೇರಿ ಅವರು ವಿಧೇಯಕ ಅಂಗೀಕಾರ ಪಡೆದಿದೆ ಎಂದು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.