ದೇಶದಲ್ಲಿ 6,650 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,72,626ಕ್ಕೆ ಏರಿಕೆ…

65
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,650 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,72,626ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 374 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,79,133ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,47,72,626 ಮಂದಿ ಸೋಂಕಿತರ ಪೈಕಿ ಈವರೆಗೆ 3,42,15,977 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.