ಬೆಂಕಿಗಾಹುತಿಯಾದ ಹಡಗು – 32 ಮಂದಿ ದುರ್ಮರಣ…

65
firstsuddi

ಢಾಕ : ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ಹಡಗು ಬೆಂಕಿಗಾಹುತಿಯಾಗಿದ್ದು, ಪರಿಣಾಮ 32 ಮಂದಿ ಸಜೀವ ದಹನವಾಗಿದ್ದಾರೆ.

ಇಂದು ಬೆಳಗ್ಗೆ ರಾಜಧಾನಿ ಢಾಕಾದಿಂದ 250 ಕಿಲೋಮೀಟರ್ ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು 500 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ.

ಮೂರು ಮಹಡಿಯ ಹಡಗಿನಲ್ಲಿ ನದಿಯ ಮಧ್ಯಭಾಗದಲ್ಲಿ ಇದ್ದಾಗ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಳಿಕ ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಈವರೆಗೆ 32 ಜನರ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನವರು ಬೆಂಕಿಯಿಂದ ಗಂಭೀರ ಸುಟ್ಟಗಾಯಗಳಾಗಿ ಮೃತಪಟ್ಟರೆ, ಕೆಲವರು ನದಿಗೆ ಹಾರಿ ಮುಳುಗಿ ಸಾವಿಗೀಡಾದರು. ಬೆಂಕಿಯಿಂದ ಸುಟ್ಟ ಗಾಯಗಳಾಗಿರುವುದರಿಂದ 100 ಮಂದಿಯನ್ನು ಪಕ್ಕದಲ್ಲಿರುವ ಬರಿಸಲಾನ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.