ನವದೆಹಲಿ : ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪುಷ್ಪನಮನ ಸಲ್ಲಿಸಿದರು.

ದೆಹಲಿಯ ರಾಜ್ ಘಾಟ್‍ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ಭಾರತವನ್ನು ಬಲಿಷ್ಠ ಹಾಗೂ ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಜನ್ಮದಿನವನ್ನು ಕೇಂದ್ರ ಸರ್ಕಾರ ಪ್ರತಿವರ್ಷ ಡಿ.25ರಂದು ಉತ್ತಮ ಆಡಳಿತ ದಿನ ವನ್ನಾಗಿ ಆಚರಿಸುತ್ತದೆ. ಸರ್ಕಾರದ ಹೊಣೆಗಾರಿಕೆ, ಜವಾಬ್ದಾರಿ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.










