ಉಡುಪಿಯಲ್ಲಿ ಸರಳ ಕ್ರಿಸ್‍ಮಸ್ ಆಚರಣೆ…

63
firstsuddi

ಉಡುಪಿ : ಕೊರೊನಾ ಭೀತಿಯ ನಡುವೆ ಕ್ರಿಸ್‍ಮಸ್ ಹಬ್ಬವನ್ನು ಉಡುಪಿ ಧರ್ಮಪ್ರಾಂತ್ಯದಲ್ಲಿ ಸರಳವಾಗಿ ಕ್ರಿಸ್‌ಮಸ್‌ ಆಚರಿಸಲಾಯಿತು.

ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರಾದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ತಮ್ಮ ಅಧಿಕೃತ ಚರ್ಚ್ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್ ನಲ್ಲಿ ಬಲಿಪೂಜೆ ಅರ್ಪಿಸಿ ಹಬ್ಬದ ಸಂದೇಶ ನೀಡಿದರು.

ಕಳೆದೆರಡು ವರ್ಷಗಳಿಂದ ಇಡೀ ವಿಶ್ವವೇ ಕೊರೊನಾ ಸೋಂಕಿನ ಅಟ್ಟಹಾಸಕ್ಕೆ ನಲುಗಿಹೋಗಿದ್ದು, ಸಾವಿರಾರು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಲಕ್ಷಾಂತರ ಕುಟುಂಬಗಳು ನಿರುದ್ಯೋಗ ಹಾಗೂ ಬಡತನಕ್ಕೆ ಬಲಿಯಾಗಿವೆ. ಬಸವಳಿದ ಈ ಲೋಕಕ್ಕೆ ಹೊಸ ಜೀವವನ್ನು ನೀಡುವ ಅಗತ್ಯವಿದೆ. ಕ್ರಿಸ್ತರ ಜನನದ ಕ್ರಿಸ್ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಿ, ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಲಿ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದರು.

ಕೊರೊನಾ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರ್ಕಾರ ಅವಕಾಶ ನೀಡಿರುವುದರಿಂದ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಬಲಿಪೂಜೆಯ ಬಳಿಕ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು. ಪೂಜೆಯ ಸಂದರ್ಭದಲ್ಲಿ ಎಲ್ಲಾ ಚರ್ಚುಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗಿತ್ತು.