ತಿರುವನಂತಪುರ : ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇರಳದಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ನಿನ್ನೆ ಕೋವಿಡ್ ಪರಾಮರ್ಶನಾ ಸಭೆ ನಡೆಸಿ ಬಳಿಕ ಕೇರಳ ಸರ್ಕಾರ ನೈಟ್ ಕರ್ಫ್ಯೂಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಅದರಂತೆ ಡಿಸೆಂಬರ್ 30 ರಿಂದ ಜನವರಿ 2ರವರೆಗೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನಿರ್ಬಂಧ ವಿಧಿಸಲಾಗಿದೆ.
ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ ಬಾರ್ ಗಳು, ಕ್ಲಬ್ ಗಳು, ಹೋಟೆಲ್ ಗಳು, ರೆಸ್ಟೋರೆಂಟ್ ಸೇರಿದಂತೆ ಯಾವುದೇ ಅಂಗಡಿಗಳು ಕಾರ್ಯನಿರ್ವಹಿಸುವಂತಿಲ್ಲ. ಇನ್ನೂ ಹೊಸ ವರ್ಷಾಚರಣೆ ವೇಳೆ ಹೆಚ್ಚು ಜನ ಸೇರದಂತೆ ಬೀಚ್ ಗಳು, ಶಾಫಿಂಗ್ ಮಾಲ್ ಗಳು, ಸಾರ್ವಜನಿಕ ಪಾರ್ಕ್ ಗಳಂತಹ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ.










