60 ವರ್ಷ ಮೇಲ್ಪಟ್ಟವರು ಬೂಸ್ಟರ್‌ ಡೋಸ್‌ ಪಡೆಯಲು ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ…

71
firstsuddi

ನವದೆಹಲಿ : 60 ವರ್ಷ ಮೇಲ್ಪಟ್ಟ ಹಾಗೂ ಇನ್ನಿತರ ಯಾವುದೇ ರೋಗದಿಂದ ಬಳಲುತ್ತಿದ್ದವರಿಗೆ ಕೊವಿಡ್-19 ಲಸಿಕೆ ಬೂಸ್ಟರ್ ಡೋಸ್ ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಇಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೂಸ್ಟರ್ ಡೋಸ್ ಪಡೆಯಲು ವೈದ್ಯರ ಚೀಟಿ ಅಗತ್ಯವಿಲ್ಲ. ಮೆಡಿಕಲ್ ಸರ್ಟಿಫಿಕೇಟ್ ಅಪ್ಲೋಡ್ ಮಾಡುವ ಅಗತ್ಯವೂ ಇಲ್ಲ. ಜನವರಿ 10ರಿಂದ ವೈದ್ಯರ ಶಿಫಾರಸಿನ ಮೇರೆಗೆ ಬೂಸ್ಟರ್ ಡೋಸ್ ಕೂಡಾ ಪಡೆಯಬಹುದು ಎಂದು ತಿಳಿಸಲಾಗಿದೆ.