ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಇಂದು ಕೋವಿಡ್ ಉನ್ನತ ಮಟ್ಟದ ಸಭೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ದೆಹಲಿಯಲ್ಲಿ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಆದರೆ ಹೆಚ್ಚಿನ ಜನರು ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವುದರಿಂದ ಯಾರೂ ಭಯಪಡುವ ಅಗತ್ಯವಿಲ್ಲ ಎಂದರು.
ನಾಳೆಯಿಂದ ಯೆಲ್ಲೋ ಅಲರ್ಟ್ ಘೋಷಣೆಯಾಗಲಿದ್ದು, ಶಾಲೆ-ಕಾಲೇಜು, ಜಿಲ್, ಸ್ಪಾಗಳು ಬಂದ್ ಆಗಲಿವೆ. ಜೊತೆಗೆ ಮೆಟ್ರೋ, ಬಸ್ ಗ ಳೆಲ್ಲ ಶೇ.50ರಷ್ಟು ಸಾಮರ್ಥ್ಯದಲ್ಲಿ ಸಂಚರಿಸಲಿವೆ. ದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ 331 ಹೊಸ ಕೊರೊನಾ ಕೇಸ್ ಗಳು ದಾಖಲಾಗಿವೆ.










