ಬೆಂಗಳೂರು : ನಗರದಲ್ಲಿ ಮತ್ತೆ ಕೊರೊನಾ ಆರ್ಭಟ ಮುಂದುವರೆದಿದೆ. ಓಕಳಿಪುರಂನಲ್ಲಿರುವ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ನ 27 ಮಂದಿಗೆ ಕೋವಿಡ್ ಸೋಂಕು ತಗುಲಿದೆ.
ಡಿಸೆಂಬರ್ 19 ರಂದು ಅಪಾರ್ಟ್ಮೆಂಟ್ ನಿವಾಸಿಗಳು ಬ್ಯಾಡ್ಮಿಂಟನ್ ಕ್ರೀಡಾಕೂಟ ಆಯೋಜನೆ ಮಾಡಿದ್ದರು. ಇದಾದ ಬಳಿಕ ಅಪಾರ್ಟ್ ಮೆಂಟ್ ನಲ್ಲಿರುವವರು ವಿದೇಶಕ್ಕೆ ಹೋಗುವ ಸಲುವಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಕೊರೊನಾ ಸೋಂಕು ಪತ್ತೆಯಾಗಿದೆ. ಬಳಿಕ ಟೂರ್ನಮೆಂಟ್ ನಲ್ಲಿ ಭಾಗವಹಿಸಿದವರನ್ನು ಟೆಸ್ಟ್ ಮಾಡಲಾಗಿದ್ದು, ಒಟ್ಟು 27 ಮಂದಿಗೆ ಸೋಂಕು ವಕ್ಕರಿಸಿದೆ.
ಈಗಾಗಲೇ ಶೋಭ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ನ 14 ಮನೆಗಳನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದು, ಅಪಾರ್ಟ್ಮೆಂಟ್ನ ಮೂರು ಮಹಡಿಗಳನ್ನು ಸೀಲ್ಡೌನ್ ಮಾಡಲಾಗಿದೆ.










