ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗಮನಕ್ಕೆ ತಂದರು.
ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಸೇರಿ ಮನೆಗಳಿಗೂ ಹಾನಿಯಾಗಿದೆ. ಈ ಪರಿಣಾಮ ಅಲ್ಲಿನ ಜನರು ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಜನ ವಾಸಿಸುತ್ತಿದ್ದಾರೆ. ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಇಂಥ ಪ್ರಕರಣಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವರಗಳನ್ನು ಒದಗಿಸಿದ ಬೆಳಗಾವಿ ಜಿಲ್ಲಾಧಿಕಾರಿ 7,600 ಪ್ರಕರಣಗಳ ಪುನರ್ ಪರಿಶೀಲನೆ ಮತ್ತು 4 ರಿಂದ 5 ಸಾವಿರ ಪ್ರಕರಣಗಳಲ್ಲಿ ಮೇಲ್ವಿಚಾರಣೆ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.










