ಹಿಜಾಬ್ ಧರಿಸಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರ ಮನವಿ…

78
firstsuddi

ಉಡುಪಿ : ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಹೆಣ್ಣು ಮಕ್ಕಳ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಪ್ರವೇಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಸೂಚನೆ ನೀಡಿದ್ದರು. ಹೀಗಾಗಿ ಕೆಲವು ವಿದ್ಯಾರ್ಥಿನಿಯರು, ನಮಗೆ ಹಿಜಾಬ್ ಧರಿಸಿ ಕ್ಲಾಸ್ ನಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ಇದರಿಂದ ನಮ್ಮ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದ್ದಾರೆ.

ಕಾಲೇಜಿನಲ್ಲಿ 60 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಅವರಲ್ಲಿ ಕೆಲವರು ಕಳೆದ ಮೂರು ದಿನಗಳಿಂದ ಹಿಜಾಬ್ ಧರಿಸುತ್ತಿದ್ದಾರೆ. ನಾವು ಅವರ ಮನೆಯವರನ್ನು ಕರೆದು ಮಾತುಕತೆ ನಡೆಸಿದ್ದೇವೆ. ಮನೆಯವರು ಅರ್ಥ ಮಾಡಿಕೊಂಡು ಒಪ್ಪಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.