ಜನ ಸಹಕರಿಸದಿದ್ದರೆ ಲಾಕ್‍ಡೌನ್ ಅನಿವಾರ್ಯ : ಗೃಹ ಸಚಿವ ಆರಗ ಜ್ಞಾನೇಂದ್ರ.

69
firstsuddi

ಚಿಕ್ಕಮಗಳೂರು : ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ. ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ. ಜನ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.

ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ವಿಷಯ. ಆದರೆ, ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆಗೆ ಬೇಸರವಿದೆ. ಕೊವಿಡ್ ಸಮಯದಲ್ಲಿ ರಾಜಕಾರಣದ ನಡೆ ಸರಿಯಲ್ಲ. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ಸಿಗರು ಏನೂ ಮಾಡಲಿಲ್ಲ ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಿಎಂ ಬದಲಾವಣೆ, ಸಚಿವರ ಕೈಬಿಡುವುದು ಗಾಳಿಸುದ್ದಿ. ಬೊಮ್ಮಾಯಿ ಸರ್ಕಾರದಲ್ಲಿ ಯಾವ ಸಚಿವರನ್ನೂ ಕೈಬಿಡಲ್ಲ ಎಂದು ತಿಳಿಸಿದ್ದಾರೆ.