ನವದೆಹಲಿ : ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ. ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ.
ಕೋವಿಡ್ ನಿಂದಾಗಿ ಕೇಂದ್ರದ ಶೇ. 50 ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ವಾಣಿಜ್ಯ ಚಟುವಟಿಕೆಗಳಿಗೆ ಶೇ. 50 ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ. ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯ ಒಟ್ಟಾರೆ ಸಂಖ್ಯೆಯ ಶೆ. 50 ರಷ್ಟು ಮಂದಿಗೆ ಮಾತ್ರವೇ ಕಚೇರಿಯಲ್ಲಿರಬೇಕು. ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.
ದೆಹಲಿ ಸರ್ಕಾರ ಸೋಂಕಿನ ಪ್ರಮಾಣ ಆಧರಿಸಿ ನಾಲ್ಕು ಹಂತಗಳಲ್ಲಿ ವಿಭಾಗವನ್ನು ಮಾಡಲಾಗಿದೆ. ಸೋಂಕಿನ ಪ್ರಮಾಣ 0.5% ರಷ್ಟಿದ್ದರೇ ಹಳದಿ, 1-2 % ನಷ್ಟಿದ್ದರೇ ಹಳದಿ ಮತ್ತು ಕಿತ್ತಳೆ ಮಿಶ್ರಿತ ಬಣ್ಣ, 2-5% ವರೆಗೂ ಕಿತ್ತಳೆ, 5% ಹೆಚ್ಚಿದ್ದರೆ ರೆಡ್ ಝೋನ್ ಎಂದು ವಿಭಾಗಿಸಿದೆ.
ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್ ಗಳು ಪತ್ತೆಯಾಗಿದೆ. ದೆಹಲಿಯ ಪಾಸಿಟಿವ್ ರೆಟ್ ಶೇ.6.46ಕ್ಕೆ ಏರಿದೆ. ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂವನ್ನು ಸರ್ಕಾರ ಜಾರಿ ಮಾಡಿದೆ.










