ಬೆಂಗಳೂರು : ಇಂದಿನಿಂದ ಸೆಕ್ಷನ್ 144 ಜಾರಿ…

89
firstsuddi

ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಈ ಮಧ್ಯೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

ವಾರಾಂತ್ಯದ ನಿಷೇಧಾಜ್ಞೆ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಅಲ್ಲದೇ, ಸದ್ಯ ಜಾರಿಯಲ್ಲಿರುವ ರಾತ್ರಿ ನಿಷೇಧಾಜ್ಞೆ ಕೂಡ ಜನವರಿ 19ರ ವರೆಗೆ ಮುಂದುವರೆಯಲಿದೆ. ಅಲ್ಲದೇ, ಇಂದಿನಿಂದ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಸಾರ್ವಜನಿಕ ಅಂಗಡಿಗಳಲ್ಲಿ ಶೇ. 50ರಷ್ಟು ಮಿತಿ ಜಾರಿಗೆ ಬರಲಿದೆ. ಈ ನಡುವೆ ನಗರ ಪೊಲೀಸ್ ಆಯುಕ್ತರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಇಂದಿನಿಂದ ಜನವರಿ 19ವರೆಗೂ ನಗರದಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಪ್ರತಿಭಟನೆ, ರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತಹವರ ವಿರುದ್ಧ ಐಪಿಸಿ 188 ಸೆಕ್ಷನ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ್ ಪಂತ್ ಅವರು ಎಚ್ಚರಿಕೆ ನೀಡಿದ್ದಾರೆ.