ಮಂಗಳೂರು : ನಗರದ ಪಾಂಡೇಶ್ವರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯ ಆರು ಮಂದಿ ಪೊಲೀಸರನ್ನು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಮಾನತು ಮಾಡಿದ್ದಾರೆ.
ಪೋಕ್ಸೋ ಪ್ರಕರಣವೊಂದರಲ್ಲಿ ಸರಿಯಾಗಿ ತನಿಖೆ ಮಾಡದೆ ನಿರ್ಲಕ್ಷ್ಯ ತೋರಿದ ಆರೋಪದಡಿ ಪಿಎಸ್ಐ ಓರ್ವರನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಪೊಲೀಸ್ ಠಾಣೆಯೊಳಗೇ ಮದ್ಯದ ಪಾರ್ಟಿ ಮಾಡಿದ್ದಾರೆ ಎಂದು ಐವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಸಿಪಿ ಮತ್ತು ಎಸಿಪಿ ನೀಡಿದ ವರದಿಯನ್ನು ಆಧರಿಸಿ ಮಹಿಳಾ ಪೊಲೀಸ್ ಠಾಣೆಯ ಇಬ್ಬರು ಎಎಸ್ಐ, ಇಬ್ಬರು ಹೆಡ್ ಕಾನ್ ಸ್ಟೇಬಲ್ ಹಾಗೂ ಓರ್ವ ಕಾನ್ ಸ್ಟೇಬಲ್ ಅಮಾನತು ಆಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.










