ಬೆಂಗಳೂರು : ಕೊರೊನಾ ಮೂರನೇ ಅಲೆ ಹಾಗೂ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಜಾರಿಗೆ ತಂದಿದೆ. ಅದರಂತೆ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿ 10 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೇಳೆ ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ.
ವೀಕೆಂಡ್ ಕರ್ಫ್ಯೂ ವೇಳೆ ಏನಿರುತ್ತೆ?
• ಹಾಲಿನ ಬೂತ್ ಗಳು, ತರಕಾರಿ ಮತ್ತು ಹಣ್ಣಿನ ಅಂಗಡಿಗಳು ತೆರೆದಿರುತ್ತವೆ.
• ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ಎಂದಿನಂತೆ ತೆರೆದಿರುತ್ತದೆ.
• ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.
• ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.
• ಪೆಟ್ರೋಲ್ ಬಂಕ್ ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.
• ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುಮತಿ
• ಹೋಟೆಲ್ ನಲ್ಲಿ ಕೇವಲ ಪಾರ್ಸೆಲ್ ಗೆ ಮಾತ್ರ ಅವಕಾಶ.
• ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.
ಏನಿರಲ್ಲ?
• ಚಿತ್ರಮಂದಿರಗಳು, ಮಾಲ್‌ಗಳು ತೆರೆಯುವಂತಿಲ್ಲ.
• ಈಜು ಕೊಳಗಳು, ಜಿಮ್ ತೆರೆಯುವಂತಿಲ್ಲ.
• ಪಬ್, ಕ್ಲಬ್, ಬಾರ್ ಅಂಡ್ ರೆಸ್ಟೋರೆಂಟ್, ಬಾರ್‌ಗಳು ಓಪನ್ ಇರಲ್ಲ
• ವಾಹನ ಸರ್ವೀಸ್ ಸೆಂಟರ್‌ಗಳು ಕಾರ್ಯನಿರ್ವಹಿಸಲ್ಲ.
• ಸಾರ್ವಜನಿಕ ಗ್ರಂಥಾಲಯಗಳು, ಬ್ಯೂಟಿ ಪಾರ್ಲರ್‌ಗಳು, ಸಲೂನ್ ತೆರೆಯುವುದಿಲ್ಲ.










