ಮಂಡ್ಯ : ಮುಖ್ಯ ಶಿಕ್ಷಕಿಯೊಬ್ಬರು ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿಯನ್ನು ಶಾಲಾಕೊಠಡಿಯಲ್ಲಿ ವಿವಸ್ತ್ರಗಳಿಸಿ, ಕೂಡಿ ಹಾಕಿರುವ ಆರೋಪ ಕೇಳಿಬಂದಿದೆ.
ಈ ಅಮಾನವೀಯ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಒಂದು ಒಂದು ವಾರದ ಹಿಂದೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಶಾಲೆಗೆ ಮೊಬೈಲ್ ತಂದ ಕಾರಣಕ್ಕಾಗಿ ಬಾಲಕಿಯನ್ನು ಚೆನ್ನಾಗಿ ಥಳಿಸಿದ್ದಲ್ಲದೇ ವಿವಸ್ತ್ರಗೊಳಿಸಿ ಊಟಕ್ಕೂ ಬಿಡದೇ ಬಾಲಕಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.
ಅರೋಪಿತ ಮುಖ್ಯ ಶಿಕ್ಷಕಿ ಈಗಾಗಲೇ ಹಲವು ಬಾರಿ ಅಮಾನತಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ, ಇದೀಗ ಮುಖ್ಯ ಶಿಕ್ಷಕಿ ಸ್ನೇಹಲತಾ ಅಮಾನವೀಯ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು, ಪೋಷಕರು ಶಿಕ್ಷಕಿಯನ್ನು ಅಮಾನತು ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.










