ಕೋಲ್ಕತ್ತಾ : ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಕೊಲ್ಕತ್ತಾದಲ್ಲಿನ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಕ್ಯಾನ್ಸರ್ ಆಸ್ಪತ್ರೆ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ಇಲ್ಲಿಯವರೆಗೆ 150 ಕೋಟಿ ಕೋವಿಡ್ ಡೋಸ್ ನೀಡಲಾಗಿದೆ. ಈ ಮೂಲಕ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದೆ. ಕೇವಲ 5 ದಿನಗಳಲ್ಲಿ 15-18 ವರ್ಷದ 1.5 ಕೋಟಿಗೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಸುಮಾರು 530 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಸುಮಾರು 400 ಕೋಟಿ ಮೊತ್ತವನ್ನು ಕೇಂದ್ರವು ಒದಗಿಸಿದೆ. ನ್ಯೂಕ್ಲಿಯರ್ ಮೆಡಿಸಿನ್ (ಪಿಇಟಿ), 3.0 ಟೆಸ್ಲಾ ಎಂಆರ್ ಐ, ಎಂಡೋಸ್ಕೋಪಿ ಸೂಟ್ ಮತ್ತು ರೇಡಿಯೊನ್ಯೂಕ್ಲೈಡ್ ಥೆರಪಿ ಯೂನಿಟ್ ನಂತಹ ಆಧುನಿಕ ಸೌಲಭ್ಯಗಳು ಸಿಎನ್ಸಿಐ ನ ಹೊಸ ಕ್ಯಾಂಪಸ್ ನಲ್ಲಿವೆ.










