ಬೆಂಗಳೂರು : ಪಾದಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳನ್ನು ಭೇಟಿಯಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಅಲ್ಲದೇ ಡಿಜಿ- ಐಜಿಪಿ ಪ್ರವೀಣ್ ಸೂದ್ ಗೆ ಪತ್ರ ಬರೆದಿರುವ ಮಕ್ಕಳ ಹಕ್ಕು ರಕ್ಷಣಾ ಆಯೋಗ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಶಿವಕುಮಾರ್ ವಿರುದ್ಧ ಕ್ರಮ ಕೈಗೊಂಡು 7 ದಿನಗಳ ಒಳಗಡೆ ವರದಿ ನೀಡುವಂತೆ ಸೂಚಿಸಿದೆ.
ಡಿ.ಕೆ.ಶಿವಕುಮಾರ್ ಅವರು ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಮಕ್ಕಳ ಗುಂಪಿನ ನಡುವೆ ಸಾಮಾಜಿಕ ಅಂತರ ಕಾಪಾಡದೇ, ಮಾಸ್ಕ್ ಧರಿಸದೇ ಫೋಟೊ ತೆಗೆಸಿಕೊಂಡಿದ್ದರು.










