ಸಿಎಂ ಬೊಮ್ಮಾಯಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಒಂದು ವಾರ ಕ್ವಾರಂಟೈನ್…

64
firstsuddi

ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ವೈದ್ಯಕೀಯ ತಪಾಸಣೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಆರ್.ಟಿ ನಗರದ ಖಾಸಗಿ ನಿವಾಸಕ್ಕೆ ವಾಪಸ್ ಆಗಿದ್ದಾರೆ.

ಮಣಿಪಾಲ್ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದುಕೊಂಡು ಆರ್.ಟಿ ನಗರ ನಿವಾಸಕ್ಕೆ ಬಂದ ಸಿಎಂ ಬೊಮ್ಮಾಯಿ ಮನೆಯಲ್ಲೇ ಒಂದು ವಾರ ಕ್ವಾರಂಟೈನ್ ಆಗಲಿದ್ದಾರೆ. ಸಿಎಂ ಪುತ್ರ ಭರತ್ ಮತ್ತು ಸೊಸೆ ಇಬ್ಬನಿ ಅವರ ಆರೋಗ್ಯ ತಪಾಸಣಾ ವರದಿ ಬಂದ ಬಳಿಕ ಅವರನ್ನು ನಿವಾಸಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದು, ಭರತ್ ಮತ್ತು ಇಬ್ಬನಿ ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲೇ ಇದ್ದಾರೆ.

ಇನ್ನೂ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಮನೆಯಿಂದಲೇ ವರ್ಚುಯಲ್ ಸಭೆ ನಡೆಸಲಿದ್ದಾರೆ.