ಬೆಂಗಳೂರು : ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ…

46
firstsuddi

ಬೆಂಗಳೂರು : ಸುರಕ್ಷತಾ ದೃಷ್ಟಿಯಿಂದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನೈಸ್ ಸಂಸ್ಥೆ ನಿರ್ಬಂಧ ಹೇರಿದೆ.

ನೈಸ್ ಸಂಸ್ಥೆ ಈ ಕುರಿತು ಮಾಧ್ಯಮ ಪ್ರಕಟಣೆ ಮಾಡಿದ್ದು, ಸರಣಿ ಅಪಘಾತಗಳಿಂದ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುವ ಪ್ರಕರಣಗಳು ಹೆಚ್ಚಾಗಿತ್ತು. ಇದೇ ಕಾರಣಕ್ಕೆ ರಾತ್ರಿ ಸಮಯದಲ್ಲಿ ನೈಸ್ ರಸ್ತೆಯಲ್ಲಿ ಬೈಕ್ ಗಳಿಗೆ ನೋ ಎಂಟ್ರಿ ಮಾಡಬೇಕು ಎಂದು ಸಂಚಾರಿ ಜಂಟಿ ಆಯುಕ್ತ ರವಿಕಾಂತೇಗೌಡ ನೈಸ್ ಸಂಸ್ಥೆಗೆ ಸೂಚಿಸಿದ್ದರು.

ಈ ಹಿನ್ನೆಲೆ ಇದೇ 16ರಿಂದ ನೈಸ್ ರಸ್ತೆಯಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರ ವರೆಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.