ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಲಸಿಕೆ ನೀಡಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ…

89
firstsuddi

ನವದೆಹಲಿ : ಯಾವುದೇ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಕೊರೊನಾ ಲಸಿಕೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಸ್ಪಷ್ಟನೆ ನೀಡಿದೆ.

ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಎನ್ ಜಿಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಯಾಗಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರವು ಈ ಅಂಶವನ್ನು ಹೇಳಿದೆ.

ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೇ ಯಾವುದೇ ಬಲವಂತದ ಲಸಿಕೆಯನ್ನು ಹಾಕಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.