ವೀಕೆಂಡ್ ಕರ್ಫ್ಯೂ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ : ಸಚಿವ ಸುಧಾಕರ್.

61
firstsuddi

ಬೆಂಗಳೂರು : ಇಂದು ಸಿಎಂ ಸಭೆ ಕರೆದಿದ್ದಾರೆ. ವೀಕೆಂಡ್ ಕರ್ಫ್ಯೂ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ. ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ. ಸಾರಿ ಮತ್ತು ILI  ಕೇಸ್ ಅವು. ಈ ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದರು.

ಬೆಳಗಾವಿಯಲ್ಲಿ ಇಬ್ಬರು ಮಕ್ಕಳು ಚುಚ್ಚು ಮದ್ದಿನಿಂದ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಮಾತನಾಡಿದ ಅವರು, ಸೆಪ್ಟಿಕ್ ಶಾಕ್ ಸಿಂಡ್ರೋಮ್ ನಿಂದ ಸತ್ತಿರೋ ಬಗ್ಗೆ ವರದಿ ಆಗಿದೆ. ಆದರೂ ಮತ್ತೊಂದು ಸುತ್ತಿನ ತನಿಖೆಗೆ ಸೂಚನೆ ನೀಡಿದ್ದೇನೆ. ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಮಾಡಲು ಸೂಚನೆ ನೀಡಲಾಗಿದೆ. ಅಲ್ಲಿನ ANM ಮತ್ತು ಫಾರ್ಮಸಿಸ್ಟ್ ರನ್ನ ತಕ್ಷಣ ಅಮಾನತು ಮಾಡಲು ಸೂಚನೆ ನೀಡಿದ್ದೇನೆ. ನೋಡಲ್ ಆಫೀಸ್ ರನ್ನ ತನಿಖೆಗೆ ಕಳುಹಿಸುತ್ತಿದ್ದೇನೆ. ಪ್ರೊಟೋಕಾಲ್ ಪ್ರಕಾರ ಚಿಕಿತ್ಸೆ ನೀಡಿದ್ದಾರಾ ಅಂತ ತನಿಖೆ ಮಾಡಲಾಗುತ್ತೆ. ಎರಡು ದಿನಗಳಲ್ಲಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.