ನಟ ಧನುಷ್, ಐಶ್ವರ್ಯಾ ವಿಚ್ಛೇದನ – 18 ವರ್ಷದ ದಾಂಪತ್ಯ ಜೀವನ ಅಂತ್ಯ…

91
firstsuddi

ಹೈದರಾಬಾದ್ : ತಮಿಳು ನಟ ಧನುಷ್ ಹಾಗೂ ರಜಿನಿಕಾಂತ್ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯದ ನಂತರ ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ತಾವು ದೂರವಾಗುತ್ತಿರುವ ಬಗ್ಗೆ ಅಧಿಕೃತ ಮಾಹಿತಿಯನ್ನು ಧನುಷ್ ಮತ್ತು ಐಶ್ವರ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ. ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ನಿರ್ಧಾರಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ಇರಲಿ ಎಂದು ಆಶಿಸುತ್ತೇನೆ. ದಯಮಾಡಿ ನಮ್ಮ ಖಾಸಗಿ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.

ಧನುಷ್ ಅವರ ಪೋಸ್ಟ್ ನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡ ಐಶ್ವರ್ಯಾ, ಇದಕ್ಕೆ ಶೀರ್ಷಿಕೆ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ನಿಮ್ಮ ಪ್ರೀತಿ ಮಾತ್ರ ಅಗತ್ಯ ಎಂದು ಬರೆದುಕೊಂಡಿದ್ದಾರೆ.

ಧನುಷ್ ಅವರು ಸೂಪರ್ ಸ್ಟಾರ್ ರಜನಿಕಾಂತ್ ಅವರ ಹಿರಿಯ ಮಗಳು ಐಶ್ವರ್ಯ ಅವರನ್ನು 18 ನವೆಂಬರ್ 2004 ರಂದು ವಿವಾಹವಾಗಿದ್ದರು. ದಂಪತಿಗೆ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.