ಬೆಂಗಳೂರು : ಪೆಡ್ಲರ್ ಗಳಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಗಳಾದ ಶಿವಕುಮಾರ್ ಹಾಗೂ ಸಂತೋಷ್ ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾರೆ. ಅಚ್ಚರಿ ವಿಷಯವೆಂದರೆ, ಇವರು ಸಿಎಂ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದರು.
ಮುಖ್ಯಮಂತ್ರಿಗಳ ಮನೆ ಇರುವ ಆರ್.ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಮೋಸ್ಟ್ ವಾಂಟೆಡ್ ಪೆಡ್ಲರ್ ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ. ಸದ್ಯ ಇಬ್ಬರು ಕಾನ್ ಸ್ಟೇಬಲ್ ಹಾಗೂ ಗಾಂಜಾ ಪೆಡ್ಲರ್ ಗಳನ್ನು ಬಂಧಿಸಿರುವ ಆರ್.ಟಿ.ನಗರ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.










