ಕಾಳಿ ಮಠದ ಋಷಿಕುಮಾರ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು…

97
firstsuddi

ಮಂಡ್ಯ : ಕಾಳಿ ಮಠದ ಋಷಿಕುಮಾರ ಸ್ವಾಮೀಜಿಗೆ ಶ್ರೀರಂಗಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಹಲವು ದಿನಗಳ ಹಿಂದೆ ಶ್ರೀರಂಗಪಟ್ಟಣಕ್ಕೆ ಬಂದಿದ್ದ ಋಷಿಕುಮಾರ ಸ್ವಾಮೀಜಿ ಜಾಮೀಯಾ ಮಸೀದಿಯನ್ನು ಕೆಡುವಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಶ್ರೀರಂಗಪಟ್ಟಣದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಎಂದು ಋಷಿಕುಮಾರ ಸ್ವಾಮೀಜಿ ಮೇಲೆ ಪ್ರಕರಣ ದಾಖಲಾಗಿತ್ತು.

ನಿನ್ನೆ ಶ್ರೀರಂಗಪಟ್ಟಣದ ಪೊಲೀಸರು ಕಡೂರಿನ ಕಾಳಿ ಮಠಕ್ಕೆ ತೆರಳಿ ಋಷಿಕುಮಾರ ಸ್ವಾಮೀಜಿಯನ್ನು ಬಂದಿಸಿದ್ದರು. ಬಳಿಕ ಸ್ವಾಮೀಜಿಯನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು ಶ್ರೀರಂಗಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಋಷಿಕುಮಾರ ಸ್ವಾಮೀಜಿಯ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದರು. ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಇಂದು ತೀರ್ಪು ನೀಡುವುದಾಗಿ ತಿಳಿಸಿದ್ದ ನ್ಯಾಯಾಲಯ ಕಾಳಿ ಸ್ವಾಮೀಜಿ ಪ್ರತಿ ಭಾನುವಾರ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಗೆ ಬಂದು ಸಹಿ ಹಾಕಿ ತನಿಖೆಗೆ ಸಹಕಾರ ನೀಡಬೇಕೆಂದು ಷರತ್ತು ವಿಧಿಸಿ ಜಾಮೀನು ನೀಡಿದೆ.