ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ…

57
firstsuddi

ಬೆಂಗಳೂರು: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಅವರು ಈ ಆರೋಪ ಮಾಡಿದ್ದಾರೆ.

ನಿನ್ನೆ ನಲಪಾಡ್ ಖಾಸಗಿ ಹೋಟೆಲ್ ನಲ್ಲಿ ಮಧ್ಯಾಹ್ನ ಗೆಟ್ ಟೂ ಗೆದರ್ ರೀತಿಯಲ್ಲಿ ಪೂರ್ವಭಾವಿ ಸಭೆ ಕರೆದಿದ್ದರು. ಆ ಕ್ಷಣದಲ್ಲಿ ನಾನು ಮುಂದಿನ ಅಧ್ಯಕ್ಷನಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತೇನೆ ಎಂದು ಪ್ರಸ್ತಾಪಿಸಿದರು. ನಂತರ ರಾತ್ರಿ ಯಲಹಂಕದ ಒಂದು ಕ್ಲಬ್ ನಲ್ಲಿ ಭೋಜನಕ್ಕೆ ಕರೆದಿದ್ದರು. ಈ ವೇಳೆ ನನ್ನನ್ನು ಹಾಗೂ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್ ಗೌಡರವರನ್ನು ಸದಸ್ಯ ಎಂದು ತಿಳಿದು ಸಮಯ ನೋಡಿ, ಏನು ಲೇ ನೀವು ಮಂಜುಗೌಡಗೆ ಸಪೋರ್ಟ್ ಮಾಡುತ್ತೀರಾ ಎಂದು ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಅಲ್ಲದೇ ಅವರ ಸ್ನೇಹಿತನ ಮೇಲೆ ಹಾಗೂ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ಅವರನ್ನು ರಾಜ್ಯ ಉಪಾಧ್ಯಕ್ಷರಾದ ಮಂಜುಗೌಡ ವಾಹನವನ್ನು ಹಿಂಬಾಲಿಸಿ ಬಂದು ಎಲ್ಲರನ್ನೂ ಪ್ರಾಣಾಪಾಯದಿಂದ ಪಾರುಮಾಡಿ ಆ ಸ್ಥಳದಿಂದ ತಪ್ಪಿಸಿ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ನಲಪಾಡ್ ಸ್ನೇಹಿತರಿಂದ ಮತ್ತು ಕುಟುಂಬ ಸದಸ್ಯರಿಂದ ನನಗೆ ಜೀವ ಬೆದರಿಕೆ ಇದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಲಪಾಡ್, ಹುಡುಗರು ಏನೋ ಗಲಾಟೆ ಮಾಡಿಕೊಂಡಿರಬೇಕು. ನಾನು 9 ಗಂಟೆಗೆ ಅಲ್ಲಿಂದ ಹೊರಟು 9-30 ರಿಂದ 9-45 ರ ಸುಮಾರಿಗೆ ಮನೆಗೆ ಬಂದೆ. 11-30ಕ್ಕೆ ಮಲಗಿಕೊಂಡಿದ್ದೇನೆ. ಬೆಳಗ್ಗೆ 6 ಗಂಟೆ ವೇಳೆಗೆ ಈ ವಿಷಯ ನನಗೆ ಗೊತ್ತಾಗಿದೆ. ಹಲ್ಲೆ ವಿಚಾರವಾಗಿ ನನ್ನದೇನೂ ತಪ್ಪು ಇಲ್ಲ ಎಂದು ಹೇಳಿದ್ದಾರೆ.