ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2021-22ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದು, ಫೆಬ್ರವರಿ 21 ರಿಂದ 26ರವರೆಗೆ ಪರೀಕ್ಷೆ ನಡೆಯಲಿದೆ.
ಎಸ್ಎಸ್ಎಲ್ಸಿ ವೇಳಾಪಟ್ಟಿ ಇಂತಿದೆ:
ಫೆಬ್ರವರಿ 21- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು ಇಂಗ್ಲಿಷ್, ಸಂಸ್ಕೃತ, ಫೆ.22 – ಸಮಾಜಶಾಸ್ತ್ರ, ಫೆ.23 – ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ, ಫೆ.24 -ಗಣಿತ, ಫೆ.25 – ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು ಸಂಸ್ಕೃತ, ಕೊಂಕಣಿ, ತುಳು, ಫೆ.26 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ.










