ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರಬೋಸ್ ಪ್ರತಿಮೆ ಸ್ಥಾಪನೆ : ಮೋದಿ.

101
firstsuddi

ನವದೆಹಲಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಪ್ರತಿಮೆಯನ್ನು ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು  ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಇಡೀ ರಾಷ್ಟ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್ ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್ ನಲ್ಲಿ ಸ್ಥಾಪಿಸಲಾಗುತ್ತಿದೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಭಾರತ ಅವರಿಗೆ ಚಿರಋಣಿಯಾಗಿರುತ್ತದೆ ಎಂಬುವುದನ್ನು ಇದು ಸೂಚಿಸುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಈ ಮುನ್ನ ಕಿಂಗ್ ಜಾರ್ಜ್ ವಿ ಅವರ ಪ್ರತಿಮೆ ಈ ಸ್ಥಳದಲ್ಲಿತ್ತು. ಆದರೆ ಅದನ್ನು 1968ರಲ್ಲಿ ತೆಗೆದುಹಾಕಲಾಗಿತ್ತು. ಇದೀಗ ನೇತಾಜಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.