ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್..!

136
firstsuddi

ಜೈಪುರ್ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿವಾಹಿತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.

ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ ಪುರ ಚೆಕ್ ಪೋಸ್ಟ್ ನಿಂದ ಕೇವಲ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆ ಇಬ್ಬರು ಕಾಮುಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿವಾಹಿತ ಮಹಿಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಮೂವರು ಯುವಕರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ದಾರಿ ಮಧ್ಯೆ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದಾರೆ. ಬಳಿಕ ಇಬ್ಬರು ಯುವಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಸುತ್ತಮುತ್ತಲಿನ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.