ವಿದ್ಯುತ್ ದರ ಏರಿಕೆ ಸುಳಿವು ನೀಡಿದ ಇಂಧನ ಸಚಿವ ಸುನಿಲ್ ಕುಮಾರ್.

78
firstsuddi

ಬೆಂಗಳೂರು : ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆಯ ಸುಳಿವನ್ನು ಇಂಧನ ಸಚಿವ ಸುನಿಲ್ ಕುಮಾರ್ ಅವರು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಬೆಂಗಳೂರು ಜಲ ಮಂಡಳಿ, ನಗರಾಭಿವೃದ್ಧಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ 12 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ. ಹೀಗಾಗಿ ವಿದ್ಯುತ್ ದರ ಏರಿಕೆ ಮಾಡುವುದು ಅನಿವಾರ್ಯ. ಸದ್ಯಕ್ಕೆ ರಾಜ್ಯದಲ್ಲಿ ಕಲ್ಲಿದ್ದಲು ಸಮಸ್ಯೆ ಇಲ್ಲ. ವಿದ್ಯುತ್ ಬಳಕೆ ಪ್ರಮಾಣ 15,000 ಮೆಗಾವ್ಯಾಟ್ ನಷ್ಟಿದ್ದು, ಈ ಬಾರಿ ಮಳೆ ಚೆನ್ನಾಗಿ ಆಗಿರುವುದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುವುದಿಲ್ಲ. ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಮೊದಲು ದರ ಏರಿಕೆ ಬಗ್ಗೆ ಶಿಫಾರಸು ಮಾಡಲಿ, ನಂತರ ಅದನ್ನು ಪರಿಶೀಲಿಸಿ ವಿದ್ಯುತ್ ದರ ಎಷ್ಟು ಏರಿಕೆ ಮಾಡಬೇಕು ಅಂತಾ ನಿರ್ಧರಿಸುತ್ತೇವೆ ಎಂದರು.