ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ವೊಂದು ಹೊರಬಿದ್ದಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ.
ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್. ಭರ್ಜರಿ ಹಾಗೂ ಬಹದ್ದೂರ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದ ಚೇತನ್ ಕುಮಾರ್ ಆ್ಯಕ್ಷನ್-ಕಟ್ ಹೇಳಿರುವ ಚಿತ್ರವಿದು. ಪುನೀತ್ ನಿಧನಕ್ಕೂ ಮುನ್ನ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ಶಿವರಾಜ್‍ಕುಮಾರ್ ಹಾಗೂ ರಾಘವೇಂದ್ರ ರಾಜ್‍ಕುಮಾರ್ ಕೂಡ ನಟಿಸಿದ್ದಾರೆ ಎಂಬುದು ವಿಶೇಷ.
ಈ ಸಿನಿಮಾದಲ್ಲಿ ಪುನೀತ್ ರಾಜ್‍ಕುಮಾರ್ ಅವರ ದೃಶ್ಯಗಳ ಶೂಟಿಂಗ್ ಈ ಮೊದಲೇ ಮುಕ್ತಾಯ ಆಗಿತ್ತು. ಅವರ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ (ಮಾ.17) ‘ಜೇಮ್ಸ್’ ರಿಲೀಸ್ ಆಗುವ ಸಾಧ್ಯತೆ ಇದೆ.










