ಪಣಜಿ : ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಅವರು ಬಿಜೆಪಿ ತೊರೆದಿದ್ದಾರೆ. ಅಲ್ಲದೇ ಪಣಜಿ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ತಂದೆಯಂತೆಯೇ ಮಗ ಉತ್ಪಲ್ ಪರಿಕ್ಕರ್ ಕೂಡ ಪಣಜಿ ಕ್ಷೇತ್ರದಿಂದಲೇ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿದೆ. ಇದರ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು. ಆದರೆ ಉತ್ಪಾಲ್ ಪರಿಕ್ಕರ್ ಸದ್ಯ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಕಳೆದ ಹಾಗೂ ಈ ಚುನಾವಣೆ ಸಮಯದಲ್ಲಿ ಪಕ್ಷಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದೆ. ಎಷ್ಟೇ ಪ್ರಯತ್ನಿಸಿದರೂ ಪಣಜಿ ಕ್ಷೇತ್ರದ ಉಮೇದುವಾರಿಕೆಯನ್ನು ಪಡೆಯಲು ನನಗೆ ಸಾಧ್ಯವಾಗಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ಪಕ್ಷಕ್ಕೆ ಅವಕಾಶವಾದಿಯಾಗಿ ಬಂದವರಿಗೆ ಟಿಕೆಟ್ ನೀಡಲಾಗಿದೆ. ಅದಕ್ಕಾಗಿಯೇ ನಾನು ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿದ್ದೇನೆ ಪರಿಕ್ಕರ್ ಪ್ರತಿಕ್ರಿಯಿಸಿದ್ದಾರೆ.