ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜ (35) ಎಂಬುವರಿಗೆ ವ್ಯಕ್ತಿಯೊರ್ವ ಚೂರಿ ಇರಿದಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಿನ್ನೆ ರಾತ್ರಿ ರೀನಾ ಡಿಸೋಜ ನೆರೆ ಮನೆಯ ಮಹಿಳೆಯೊಂದಿಗೆ ಮಾತನಾಡುತ್ತಿದ್ದಾಗ, ಕುಡಿತದ ಚಟ ಹೊಂದಿದ್ದ ನೆರೆಮನೆಯ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ನಡೆಯುವ ಸಂದರ್ಭದಲ್ಲಿ ರೀನಾ ಅವರಿಗೆ ಚಾಕು ಇರಿದಿದ್ದಾನೆ.
ಕೂಡಲೇ ಸ್ಥಳೀಯರು ರೀನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ರಕ್ತಸ್ರಾವವಾದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಪ್ರಸ್ತುತ ರೀನಾ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










