ಬಿಜೆಪಿ ಎಂದರೆ ಹಿಂದುತ್ವವಲ್ಲ : ಉದ್ಧವ್ ಠಾಕ್ರೆ.

67
firstsuddi

ಮುಂಬೈ: ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕಿಡಿಕಾರಿದರು.

ಬಾಳಾಸಾಹೇಬ್ ಠಾಕ್ರೆ ಅವರ 96ನೇ ಜನ್ಮದಿನದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕಾಲಿದಳ ಮತ್ತು ಶಿವಸೇನೆಯಂತಹ ಹಳೆಯ ಘಟಕಗಳು ಈಗಾಗಲೇ ಬಿಜೆಪಿ ಮೈತ್ರಿಯಿಂದ ಹೊರನಡೆದಿದೆ. ಇದರಿಂದಾಗ ಬಿಜೆಪಿ ನೇತೃತ್ವದ ಎನ್ ಡಿಎ ಈಗಾಗಲೇ ಕುಗ್ಗಿದೆ ಎಂದ ಅವರು ಶಿವಸೇನೆಯನ್ನು ರಾಜ್ಯದ ಹೊರಗೂ ವಿಸ್ತರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಆದರೆ, ನಮ್ಮ ಪಕ್ಷ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿ ಅವಕಾಶವಾದಿ, ಬಿಜೆಪಿ ಅನುಸರಿಸುತ್ತಿರುವ ಹಿಂದುತ್ವ ಕೇವಲ ನೆಪ ಮಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.