ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಶ್ನೆಯೇ ಇಲ್ಲ : ಸಚಿವ ಗೋವಿಂದ ಕಾರಜೋಳ.

74
firstsuddi

ಬೆಂಗಳೂರು: ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಸ್ಪಷ್ಟಪಡಿಸಿದ್ದಾರೆ.

ಮಹಿಳಾ ವಿವಿ ಮುಚ್ಚುತ್ತಾರೆ ಎಂಬ ವದಂತಿಗೆ ಸ್ಪಷ್ಟನೆ ನೀಡಿರುವ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆ ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು ಮತ್ತು ಇಂತಹ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವಿನಂತಿಸಿದರು.

ವಿವಿ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲು ಸೇವೆಯ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯವು ನನ್ನದಾಗಿದೆ. ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. 13 ಜಿಲ್ಲೆಗಳು ಇದರ ವ್ಯಾಪ್ತಿಯಲ್ಲಿವೆ. ಈ ವಿವಿಗೆ ಮಹಿಳಾ ವಿಶ್ವವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿ ಅವರಿಗೆ ಗೌರವ ಸಲ್ಲಿಸಿದ ಕೀರ್ತಿ ನಮ್ಮ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.