ಮಾನಸಿಕ ಖಿನ್ನತೆಗೆ ಒಳಗಾಗಿದ್ರಾ ಬಿಎಸ್‍ವೈ ಮೊಮ್ಮಗಳು ಸೌಂದರ್ಯ?

65
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಸ್‍ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ ಅದೇ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ದಂಪತಿಗೆ 9 ತಿಂಗಳ ಗಂಡು ಮಗು ಇದೆ. ಮಗು ಆದ ಬಳಿಕ ಸೌಂದರ್ಯ ಅವರು ಡಿಪ್ರೆಷನ್(ಮಾನಸಿಕ ಖಿನ್ನತೆ)ಗೆ ಒಳಗಾಗಿದ್ದರು ಎನ್ನಲಾಗಿದೆ.

ಈಗಾಗಲೇ ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಅಬ್ಬಿಗೆರೆಯಲ್ಲಿರುವ ಡಾ.ನೀರಜ್ ನಿವಾಸಕ್ಕೆ ಸೌಂದರ್ಯ ಪಾರ್ಥಿವ ಶರೀರವನ್ನು ರವಾನಿಸಲಾಗಿದೆ. ಅಂತ್ಯ ಸಂಸ್ಕಾರಕ್ಕೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.